ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಾದ್ಯಾಂತ ಹಲವು ಜಿಲ್ಲೆಗಳಲ್ಲಿ ಕಳೆದ ಎರೆಡು ದಿನಗಳಿಂದ ಬಿಟ್ಟು ಬಿಡದೇ ಮಳೆಯಾಗ್ತಿದೆ.. ಇನ್ನೂ ಅನೇಕ ಕಡೆ ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡುವಂತಾಯ್ತು.. ಇನ್ನೂ ಇದೇ ರೀತಿ 4 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..
ಬೆಂಗಳೂರು, ಮೈಸೂರು, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗಲಿದ್ದು, ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇತ್ತ ದಾವಣಗೆರೆ, ರಾಮನಗರ, ಮಂಡ್ಯ, ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 14 ಮತ್ತು ನವೆಂಬರ್ 15ರಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.








