Heavy Rain | ಬಸವಸಾಗರದಿಂದ ಕೃಷ್ಣೆಗೆ ನೀರು ಬಿಡುಗಡೆ
ಯಾದಗಿರಿ : ಬಸವಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗುವ ಸಾಧ್ಯತೆಗಳಿರುವುದರಿಂದ ಕೃಷ್ಣಾ ನದಿಗೆ ಜಲಾಶಯದಿಂದ 61900 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಸದ್ಯ ಜಲಾಶಯಕ್ಕೆ 60000 ಸಾವಿರ ಕ್ಯೂಸೆಕ್ ಒಳಹರಿವಿದೆ
ಬಸವಸಾಗರ ಜಲಾಶಯದಲ್ಲಿ 33.33 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, ಸದ್ಯ 28.820 ಟಿಎಂಸಿ ನೀರು ಸಂಗ್ರಹವಾಗಿದೆ.
ಇಂದು ನಾಳೆ ಜಲಾಶಯಕ್ಕೆ ಇನ್ನಷ್ಟು ನೀರು ಬರುವ ಸಾಧ್ಯತೆಗಳಿವೆ.

ಹೀಗಾಗಿ ಯಾದಗಿರಿ ಜಿಲ್ಲಾಡಳಿತ ಫುಲ್ ಅಲರ್ಟ್ ಆಗಿದ್ದು, ವಾಹನದಲ್ಲಿ ಮೈಕ್ ಮೂಲಕ ಅನೌನ್ಸ್ ಮಾಡಿ ಜನರಿಗೆ ಜಾಗೃತಿ ಮೂಡಿಸುತ್ತಿದೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಹಾಗೂ ಹಲವು ನದಿತೀರದ ಗ್ರಾಮಗಳಲ್ಲಿ ಮೈಕ್ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ.
ಕೃಷ್ಣಾ ನದಿಗೆ ಅಧಿಕ ನೀರು ಬಿಡುವುದರಿಂದ ಎಚ್ಚರಿಕೆಯಿಂದ ಇರಲು ಸೂಚನೆ ಜೊತೆಗೆ ಜನ-ಜಾನುವಾರು ನದಿತೀರಕ್ಕೆ ಹೋಗಬಾರದು ಎಂದು ಮೈಕ್ ಮೂಲಕ ಅನೌನ್ಸ್ ಮಾಡಲಾಗುತ್ತಿದೆ.