ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 18ರವರೆಗೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಕುಸಿತವಾದ ಹವಾಮಾನದಿಂದಾಗಿ ಬೆಂಗಳೂರಲ್ಲಿ ರಾತ್ರಿ ಜೋರಾಗಿ ಮಳೆ ಬರುತ್ತೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಿದೆ.