Heavy Rain | ರಾಜ್ಯದಲ್ಲಿ ನಾಳೆಯವರೆಗೆ ಭಾರಿ ಮಳೆ
ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ
ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಸೂಚನೆ
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ
ಬೆಂಗಳೂರು : ಕಳೆದ ಎರಡು ವಾರಗಳಿಂದ ಅಬ್ಬರ ನಿಲ್ಲಿಸಿದ್ದ ಮಳೆರಾಯ ಮತ್ತೆ ಆರ್ಭಟ ಶುರು ಮಾಡಿದ್ದಾನೆ.
ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮುಖ್ಯವಾಗಿ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದ್ದು, ಕಡಲ ತೀರಕ್ಕೆ ಮೀನುಗಾರರು ಹೋಗಬಾರದು ಎಂದು ಸೂಚನೆ ನೀಡಿದೆ.

ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇನ್ನೆರಡು ದಿನ ಮೋಡ ಕವಿದ ವಾತಾವರಣ ಇರಲಿದೆ.
ಆಗಾಗ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣ ಆರ್ಭಟಿಸಿದ್ದು, ಗಂಗಾವಳಿ ನದಿಯಲ್ಲಿ ಲಾರಿ ತೇಲಿ ಹೋಗಿದೆ.
ಕೋಲಾರ, ಮೈಸೂರು ಸೇರಿದಂತೆ ಮೈಸೂರು ಭಾಗದಲ್ಲಿ ಉತ್ತಮ ಮಳೆಯಾಗಿದೆ. ಇನ್ನೆರಡು ದಿನಗಳು ಮಳೆ ಹೀಗೆ ಮುಂದುವರೆಲಿದೆ.








