ಮೈದುಂಬಿ ಹರಿಯುತ್ತಿವೆ ಬೆಳಗಾವಿ ಸಮೀಪದ ಜಲಪಾತಗಳು…
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ವರ್ಷಧಾರೆ ಹಿನ್ನಲೆಯಲ್ಲಿ ಬೆಳಗಾವಿಗೆ ಸಮೀಪ ಇರುವ ಜಲಪಾತಗಳು ಮೈದುಂಬಿ ಧುಮ್ಮುಕ್ಕುತ್ತಿವೆ.
ಮೈದುಂಬಿ ಧುಮ್ಮುಕ್ಕುತ್ತಿರುವ ಧೂದ್ಸಾಗರ್, ಶಿಂಭೋಲಾ, ಸಡಾ ಫಾಲ್ಸ್ ನೋಡುಗರ ಕಣ್ಮನ ಸೆಳೆಯುತ್ತಿವೆ. ಕರ್ನಾಟಕ ಗೋವಾ ಗಡಿಯ ಪಶ್ಚಿಮ ಘಟ್ಟದಲ್ಲಿರುವ ಜಲಪಾತಗಳು ಸೇರಿದಂತೆ ಗೋಕಾಕ್ ಜಲಪಾತಕ್ಕೂ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.
ಮಹಾರಾಷ್ಟ್ರದಲ್ಲಿ ಘಟ್ಟ ಪ್ರದೇಶಗಳಲ್ಲಿ ಮಳೆಯ ಅಬ್ಬರದಿಂದಾಗಿ ಅಪಾರ ಪ್ರಮಾಣದ ನೀರು ರಾಜ್ಯಕ್ಕೆ ಹರಿದು ಬರುತ್ತಿದೆ. ಬೆಳಗಾವಿ ಜಿಲ್ಲೆಯ ಕೃಷ್ಣಾ,ದೂಧಗಂಗಾ, ವೇದಗಂಗಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಚಿಕ್ಕೋಡಿ, ರಾಯಬಾಗ, ಅಥಣಿ ತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಅಲರ್ಟ್ ಘೋಷಣೆ
ಈಗಾಗಲೆ ನದಿ ಪಾತ್ರದಲ್ಲಿ ಎಚ್ಚರ ವಹಿಸುವಂತೆ ಜಿಲ್ಲಾಡಳಿದ ಸೂಚನೆ ನೀಡಿದೆ. ಎನ್.ಡಿ.ಆರ್. ತಂಡಗಳ ಮೂಲಕ ನದಿ ಪಾತ್ರದ ಗ್ರಾಮಗಳಿಗೆ ತೆರಳಿ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡಲಾಗುತ್ತಿದೆ. ಸತತ ಎರಡು ವರ್ಷಗಳಿಂದ ಪ್ರವಾಹದಿಂದ ತತ್ತರಿಸಿರುವ ಕೃಷ್ಣಾ ನದಿ ತೀರದ ಜನಕ್ಕೆ ಮತ್ತೊಮ್ಮೆ ಪ್ರವಾಹದ ಭೀತಿ ಎದುರಾಗಿದೆ.
ಮುಂದಿನ 3 ರಿಂದ 5 ದಿನ ಬೆಳಗಾವಿಯಲ್ಲಿ ಭಾರಿ ಮಳೆ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. heavy rain: water falls attracting tourists