ಕೊಡಗಿನಲ್ಲಿ ಕೆಲ ದಿಗಳಿಂದ ಧಾರಾಕಾರ ಮಳೆಯಾಗುತ್ತಿದೆ. ನಿನ್ನೆಯೂ ಸಹ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇದರ ನಡುವೆಯೇ ಮತ್ತಷ್ಟು ದಿನಗಳ ಕಾಲ ಹೀಗೆಯೇ ಮುಂಗಾರು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದೀಗ ಮುಂಜಾಗ್ರತಾ ಕ್ರಮವಾಗಿ ಇಂದು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯ ವರದಿಯ ಪ್ರಕಾರ ಜಿಲ್ಲೆಯಲ್ಲಿ ಇಂದು 64.5ರಿಂದ 115.5 ಮಿಮಿ ವರೆಗೂ ಮಳೆಯಾಗವ ಸಾಧ್ಯತೆ ದಟ್ಟವಾಗಿದೆ. ಇನ್ನೂ ನಾಳೆಯಿಂದ 7ನೇ ತಾರಿಕಿನ ವರೆಗೂ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಷ್ಟೇ ಅಲ್ದೇ ಪ್ರವಾಹ ಬಂದ ಸಂದರ್ಭದಲ್ಲಿ ಎದುರಿಸಲು ಸನ್ನದ್ಧವಾಗಿರುವ ಜಿಲ್ಲಾಡಳಿತ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಎನ್ ಡಿ ಆರ್ ಎಫ್ ತಂಡವನ್ನು ಸಜ್ಜಾಗಿರಿಸಿದೆ.
ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ
ನಂದಿಗ್ರಾಮ: ಪಶ್ಚಿಮ ಬಂಗಾಳದ ಹೈವೋಲ್ಟೇಜ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆಯಲ್ಲಿ ಈಗ ಅನಿರೀಕ್ಷಿತ ರಾಜಕೀಯ ತಿರುವು ಕಂಡುಬಂದಿದೆ. ತನ್ನ ಬಣದ ಅಭ್ಯರ್ಥಿಯೇ ಕಣದಿಂದ ಹಿಂದೆ ಸರಿದು ಆಘಾತ ನೀಡಿದ...








