Kolar: ಬಿರುಗಾಳಿ ಸಹಿತ ಭಾರಿ ಮಳೆ | ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶ

1 min read
Kolar Heavy Rainfall Saaksha Tv

ಬಿರುಗಾಳಿ ಸಹಿತ ಭಾರಿ ಮಳೆ | ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶ

ಕೋಲಾರ: ರಾಜ್ಯಾದ್ಯಂತ ಕಳೆದ 3-4 ದಿವಸಗಳಿಂದ ಭಾರಿ ಮಳೆಯಾಗುತ್ತಿದ್ದು. ಕಳೆದ ರಾತ್ರಿ ಕೊಲಾರದಲ್ಲಿ ಸುರಿದ ಭಾರಿ ಮಳೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದೆ.

ಜಿಲ್ಲೆಯ ಶ್ರೀನಿವಾಸಪುರ, ಕೆಜಿಎಫ್ ಹಾಗೂ ಬಂಗಾರಪೇಟೆ ತಾಲೂಕಿನಲ್ಲಿ ಬಿರುಗಾಳಿ ಸಹಿತ ಹೆಚ್ಚು ಮಳೆಯಾಗಿ ಬಾರಿ ಮಳೆಗೆ ಅಪಾರ ಪ್ರಮಾಣದ ಬೆಳೆ ನಷ್ಟ ಉಂಟಾಗಿದೆ. ಶ್ರೀನಿವಾಸಪುರ ತಾಲೂಕಿನ ಕದಿರಂಪಲ್ಲಿ ಗ್ರಾಮದ ಸುತ್ತಮುತ್ತ ಗುಡುಗು, ಸಿಡಿಲು, ಬೀರುಗಾಳಿ ಸಹಿತ ಮಳೆದಯಿಂದ ಮಾವಿನ ಮರಗಳು ನೆಲಕಚ್ಚಿವೆ. ಇದರಿಂದ ಲಕ್ಷಾಂತರ ರೂಪಾಯಿ ಮೈಲ್ಯದ ಮಾವು ಹಾಳಾಗಿದೆ.

ಇದರಿಂದ ಕಂಗೆಟ್ಟ ರೈತ ಕಣ್ಣೀರು ಹಾಕುತ್ತಿದ್ದಾನೆ. ವರ್ಷಕ್ಕೆ ಒಂದೆ ಬೆಳೆಯಾಗಿರುವ ಮಳೆಯಿಂದ ರಾತ್ರೋರಾತ್ರಿ ಮಾವಿನ ಫಸಲನ್ನು ರೈತ ಕಳೆದುಕೊಂಡಿದ್ದಾನೆ. ಸುಮಾರು 8 ಲಕ್ಷ ರೂ ನಷ್ಟವುಂಟಾಗಿದೆ ಎಂದು ಅಂದಾಜಿಸಲಾಗಿದೆ.

ಹಲವೆಡೆ ತೆಂಗಿನ ಮರ ಹಾಗೂ ಕರೆಂಟ್ ಕಂಬಗಳು ನೆಲಕ್ಕುರುಳಿವೆ. ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಸುತ್ತಮುತ್ತ ವಿವಿಧ ಹಣ್ಣು ತರಕಾರಿ ಬೆಳೆಗಳು ನಾಶವಾಗಿದೆ. ಶ್ರೀನಿವಾಸಪುರ ಪಟ್ಟಣದ ಪವನ್ ಆಸ್ಪತ್ರೆ ಬಳಿ ಸಿಡಿಲು ಬಡಿದ ಹಿನ್ನೆಲೆ ತೆಂಗಿನ ಮರ ಹೊತ್ತಿ ಉರಿದ ಘಟನೆ ಕೂಡ ನಡೆದಿದೆ.

ಕುಡಿಚರವು ಗ್ರಾಮದಲ್ಲಿ ನಾರಾಯಣಸ್ವಾಮಿ ಎಂಬುವರಿಗೆ ಸೇರಿದ ಮನೆಗೆ ಸಿಡಿಲು ಬಡಿದು ಮೇಲ್ಚಾವಣಿ ಹಾನಿಯಾಗಿದೆ. ರಾತ್ರಿ ಸುರಿದ ಗುಡುಗು ಸಹಿತ ಮಳೆ ವೇಳೆ ಸಿಡಿಲು ಬಡಿದು ಮನೆಯ ಮೇಲ್ಚಾವಣಿಗೆ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳಿಗೆ ಹಾನಿಯಾಗಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd