Heavy Rain | ಶಿವಮೊಗ್ಗ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಶಿವಮೊಗ್ಗ : ಮಲೆನಾಡು ಶಿವಮೊಗ್ಗದಲ್ಲಿ ಬೆಳ್ಳಂಬೆಳ್ಳಗ್ಗೆ ವರುಣನ ಅಬ್ಬರ ಮುಂದುವರೆದಿದೆ.
ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯುತ್ತಿದೆ.
ಬೆಳಗ್ಗೆಯಿಂದಲೇ ದಟ್ಟವಾಗಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಅಲ್ಲಲ್ಲಿ ವರುಣನ ಸಿಂಚನವಾಗಿದೆ.

ನಿರಂತರ ಮಳೆಯಿಂದಾಗಿ ಶಾಲಾ-ಕಾಲೇಜು, ಕಚೇರಿಗೆ ಹೋಗುವವರಿಗೆ ತೊಂದರೆಯಾಗಿದೆ.
ಜನರು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ.
ಇತ್ತ ನಿರಂತರ ಮಳೆಯಿಂದಾಗಿ ಹವಾಮಾನ ಇಲಾಖೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.