Heavy Rain | ಉತ್ತರ ಒಳನಾಡಿನ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಪ್ರಮಾಣದ ಮಳೆಯಾಗುತ್ತಿದೆ.
ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಾಜ್ಯದಾದ್ಯಂತ ಇನ್ನೂ ಮೂರು ದಿನ ಭಾರಿ ವರ್ಷಧಾರೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಅಕ್ಟೋಬರ್ 18 ರವರೆಗೆ ರಾಜ್ಯದಾದ್ಯಂತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಒಳನಾಡಿನ ಭಾಗದಲ್ಲಿ ಭಾರಿ ಮಳೆಯಾಗುವ ಸಾದ್ಯತೆ ಇರುವುದಿರಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ಗದಗ ರಾಯಚೂರು, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಈ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.