ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆ
ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಜೂನ್ 30 ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಜೂನ್ 28 ರಿಂದ 2 ದಿನ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದಲ್ಲದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ಮಳೆ ಸಾಧ್ಯತೆ ಇದ್ದು, ಇಂದು ಮೋಡ ಮುಸುಕಿದ ವಾತಾರವಣ ಮುಂದುವರೆದಿದೆ.








