Karnataka | ಮುಂದಿನ ಐದು ದಿನ ಭಾರಿ ಮಳೆ
ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಅಬ್ಬರಿಸುತ್ತಿರುವ ವರುಣನ ಆರ್ಭಟ ಮುಂದಿನ ಐದು ದಿನಗಳವರೆಗೂ ಮುಂದುವರೆಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಲ್ಲದೇ ಮುಂಗಾರು ಮಳೆ ಪೂರ್ಣ ಪ್ರಮಾಣದಲ್ಲಿ ರಾಜ್ಯದಾದ್ಯಂತ ಆವರಿಸುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.
ಇಂದು ಸಂಜೆ ವೇಳೆಗೆ ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ.

ಹೀಗಾಗಿ ಈ ಎಲ್ಲಾ ಜಿಲ್ಲೆಗಳಲ್ಲೂ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಅಲ್ಲದೇ ಮುಂದಿನ ನಾಲ್ಕು ದಿನ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.








