ರಾಜ್ಯದ ಹಲವೆಡೆ ಭಾರಿ ವರ್ಷಧಾರೆ : ಬೆಂಗಳೂರಲ್ಲಿ ಜಿಟಿಜಿಟಿ ಮಳೆ Heavy rainfall
ಬೆಂಗಳೂರು : ರಾಜ್ಯದಲ್ಲಿ ಸ್ವಲ್ಪ ಗ್ಯಾಪ್ ಕೊಟ್ಟು ಮುಂಗಾರು ಅಬ್ಬರಿಸಲು ಶುರು ಮಾಡಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ ಆಗುತ್ತಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಜಿಟಿಜಿಟಿ ಮಳೆಯಾಗುತ್ತಿದ್ದು, ವಾಹನ ಸಂಚಾರಕ್ಕೆ ತೊಡಕಾಗಿದೆ.
ಇನ್ನು ಕರಾವಳಿ, ಮಲೆನಾಡು ಭಾಗದಲ್ಲಿ ಮುಂಗಾರು ಚುರುಕಾಗಿದ್ದು, ನೇತ್ರಾವತಿ, ಫಲ್ಗುಣಿ ನದಿಗಳ ಹರಿವು ಹೆಚ್ಚಿದೆ.
ಮಂಗಳೂರಿನ ಕೆಲವೆಡೆ ಮರಗಳು ನೆಲಕ್ಕೆ ಉರುಳಿವೆ. ಉಡುಪಿಯಲ್ಲಿ ಭಾರೀ ಮಳೆಗೆ 15ಕ್ಕೂ ಹೆಚ್ಚು ಮನೆಗಳು ಹಾನಿಗೊಂಡಿವೆ.
ಬೆಂಗಳೂರು, ಹಾಸನ, ಮೈಸೂರು, ಚಿತ್ರದುರ್ಗ ಸೇರಿ ಹಲವೆಡೆ ಜಿಟಿಜಿಟಿ ಮಳೆಯಾಗುತ್ತಿದ್ದು, ವಿಜಯಪುರ, ಹುಬ್ಬಳ್ಳಿ-ಧಾರವಾಡ, ಬೆಳಗಾವಿಯಲ್ಲಿ ಮಳೆ ವ್ಯಾಪಕವಾಗಿ ಆಗಿದೆ.
ಇನ್ನು ಕೆಲವು ಭಾಗದಲ್ಲಿ ಮೋಡ ಮುಸುಕಿದ ವಾತಾವರಣ ಇದೆ.