ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ದಕ್ಷಿಣ ಕನ್ನಡ, ಉಡುಪಿ, ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಅಲ್ಲದೇ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆ ಹೆಚ್ಚಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಲವೆಡೆ ಮಳೆರಾಯ ಶಾಂತವಾಗಿದ್ದಾನೆ. ಇಂದಿನಿಂದ ಮೂರು ದಿನಗಳ ಕಾಲ ಕೂಡ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಕೃಷಿ ಚಟುವಟಿಕೆಗಳಿ ಗರಿಗೆದರಿವೆ. ಜೂನ್ 24ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ತುಮಕೂರು, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿರುವ ಕುರಿತು ವರದಿಯಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.