Rain | ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಸಾಧ್ಯತೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ
ಭಾರತೀಯ ಹವಾಮಾನ ಇಲಾಖೆಯಿಂದ ಮಾಹಿತಿ
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನಲ್ಲಿ ಮಳೆ
ಬೆಂಗಳೂರು : ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಪರಿಣಾಮ ರಾಜ್ಯದ ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ಇಂದು ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಗದಗ, ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Heavy rainfall is likely in many parts of the state today









