ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ : ಭಾರಿ ಮಳೆ ಸಾಧ್ಯತೆ

1 min read
karnataka saaksha tv

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ : ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಸದ್ಯ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ಜಿಟಿಜಿಟಿ ಮಳೆ ಮುಂದುವರೆದಿದೆ.

ಈ ಮಧ್ಯೆ ಮುಂದು ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದೆ. ಪರಿಣಾಮ ಈ ಬಾರಿ ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿದೆ.

rainfall saaksha tv
 

ಅದರಂತೆ ಮುಂದಿನ ನಾಲ್ಕು ದಿನ ರಾಜ್ಯದ ದಕ್ಷಿಣ ಒಳನಾಡಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆ ಸುರಿಯಲಿದೆ. ಈ ಹಿನ್ನೆಲೆ ಎರಡು ದಿನ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ನವೆಂಬರ್ 11 ಹಾಗೂ 12 ರಂದು ಕೆಲವೆಡೆ ಭಾರಿ ಮಳೆ ಬೀಳಲಿದೆ.

ಪ್ರಮುಖವಾಗಿ ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ, ಕೊಡಗು, ಹಾಸನ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆಗಳಿವೆ.

ಈ ಹಿನ್ನಲೆಯಲ್ಲಿ ಈ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd