Heavy Rain | ಕೊಪ್ಪಳ ಜಿಲ್ಲೆಯಾದ್ಯಂತ ಧಾರಾಕಾರ ಮಳೆ
ಕೊಪ್ಪಳ : ಕೆಲದಿನಗಳಿಂದ ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಜೋರಾಗಿದೆ. ಅದರಂತೆ ಕೊಪ್ಪಳ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ.
ಇದರಿಂದ ಕೆಲವೆಡೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.
ಹೀಗಾಗಿ ಕಿನ್ನಾಳ ಡ್ಯಾಂಗೆ ಅಪಾರ ಪ್ರಮಾಣದ ನೀರು ಬಂದು ಸೇರುತ್ತಿದೆ.
ಇದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಹೊರ ಹರಿಸಲಾಗಿದೆ.
ಹೀಗಾಗಿ ಕೊಪ್ಪಳ ತಾಲೂಕಿನ ಗೊಂಡಬಾಳ ಗ್ರಾಮಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿದೆ.
ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವ ಸಾಧ್ಯತೆ ಇದೆ.
ಗ್ರಾಮಕ್ಕೆ ನೀರು ನುಗ್ಗಿರುವ ಕಾರಣದಿಂದ ಜನರು ಆತಂಕಗೊಂಡಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.