ಮಡಿಕೇರಿ : ಜಿಲ್ಲೆಯಲ್ಲಿ ಇನ್ನೊಂದು ವಾರ ಮಳೆಯಾಗುವ ಸಾಧ್ಯತೆ ಇದ್ದು, ಜೂನ್ ತಿಂಗಳಲ್ಲಿ ಜಿಲ್ಲೆಗೆ ಆಗಮಿಸಿದ್ದ ಎನ್ ಡಿ ಆರ್ ಎಫ್ ತಂಡವನ್ನು ಜಿಲ್ಲೆಯಲ್ಲಿ ಉಳಿಸಿಕೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಈಗಾಗಲೇ ಭಾರೀ ಮಳೆಯಿಂದ ಸಮಸ್ಯೆ ಎದುರಾಗಿವುದರಿಂದ ಮತ್ತೆ ಮಳೆ ಮುಂದುವರಿದಲ್ಲಿ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ಕ್ರಮವಾಗಿ ಎನ್ ಡಿಆರ್ ಎಫ್ ತಂಡವನ್ನು ಜಿಲ್ಲೆಯಲ್ಲಿ ಅಲರ್ಟ್ ಮಾಡಿಟ್ಟುಕೊಳ್ಳಲಾಗಿದೆ. ಇನ್ನು ಒಂದು ವಾರ ಮಳೆ ಮುಂದುವರಿಯುವ ಮುನ್ಸೂಚನೆ ಇರುವುದರಿಂದ ಇನ್ನೂ 15 ದಿನಗಳ ಕಾಲ ಎನ್ ಡಿಆರ್ ಎಫ್ ತಂಡ ಜಿಲ್ಲೆಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಈಗಾಗಲೇ ಕಳೆದ ನಾಲ್ಕೈದು ದಿನಗಳಿಂದಲೂ ಜಿಲ್ಲೆಯ ಅಲ್ಲಲ್ಲಿ ಮಳೆ ಸುರಿಯುತ್ತಲೇ ಇದೆ. ಹೀಗಾಗಿ ಜಿಲ್ಲೆಯ ಜನರಲ್ಲಿ ಒಂದು ರೀತಿಯ ಭಯದ ವಾತಾವರಣ ಮನೆ ಮಾಡಿದೆ.








