ದಿನದಿಂದ ದಿನಕ್ಕೆ ತಾಪಮಾನ ಏರುತ್ತಿದ್ದು, ಇದರ ಪರಿಣಾಮವಾಗಿ ಏಪ್ರಿಲ್ 7 ಮತ್ತು 8ರಂದು ರಾಜ್ಯದ ವಿವಿಧೆಡೆ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಹಲವು ಕಡೆ ಕನಿಷ್ಠ 35 ಡಿಗ್ರಿ ಸೆಲ್ಸಿಯಸ್ ನಿಂದ ಗರಿಷ್ಠ 40 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ದಾಖಲಾಗಿದ್ದು, ಮುಂದಿನ ವಾರದಲ್ಲಿ ಇದರ ಪ್ರಮಾಣ ಮತ್ತಷ್ಟು ಏರಲಿದೆ. ತಾಪಮಾನ ಹೆಚ್ಚಳಗೊಳ್ಳುವ ಹಿನ್ನೆಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಏಪ್ರಿಲ್ 7ರಂದು ಹೆಚ್ಚು ಮಳೆಯಾಗಲಿದ್ದು ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಏಪ್ರಿಲ್ 8ರಂದು ದಕ್ಷಿಣ ಒಳನಾಡಿನ ಹಲವೆಡೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಾಪಮಾನದಲ್ಲಿ ನಿರಂತರ ಏರಿಕೆಯ ಪರಿಣಾಮ ಮತ್ತು ಆರ್ದ್ರತೆಯಲ್ಲಿನ ಏರುಪೇರಿನ ಹಿನ್ನೆಲೆಯಲ್ಲಿ ಸದ್ಯದ ಮಾಹಿತಿ ಪ್ರಕಾರ ಏಪ್ರಿಲ್ 7 ಮತ್ತು ಏಪ್ರಿಲ್ 8ರಂದು ಗುಡುಗು, ಸಿಡಿಲು ಸಹಿತ ರಾಜ್ಯದ ಹಲವೆಡೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದಿರುವ ಇಲಾಖೆ ಮುಂದಿನ ದಿನಗಳಿಗೂ ಇದು ವಿಸ್ತರಣೆಯಾಗಬಹುದು ಎಂದು ತಿಳಿಸಿದೆ.
ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್
ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ವಾಹನ ಪ್ರೇಮ ಇಡೀ ದೇಶಕ್ಕೇ ಗೊತ್ತು. ಅವರ ಬಳಿ ಇರುವ ಐಷಾರಾಮಿ ಕಾರುಗಳ ಸಾಲಿಗೆ ಈಗ ವಿಮಾನದಂತಹ...








