ಚಿಕ್ಕೋಡಿ : ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯ ಅಬ್ಬರ ಶುರುವಾಗಿದೆ. ಹೀಗಾಗಿ ಕಲವು ಪ್ರದೇಶಗಳಲ್ಲಿ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಭಾರೀ ಮಳೆಗೆ (heavy rains) ಚೆಕ್ ಪೊಸ್ಟ್ (check post) ಛಾವಣಿ ಹಾರಿ ಹೋಗಿ ಕರ್ತವ್ಯ ನಿರತ ಸಿಬ್ಬಂದಿ ಗಾಯಗೊಂಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಈ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಹತ್ತಿರದ ಕರ್ನಾಟಕ-ತ ಮಹಾರಾಷ್ಟ್ರ ಗಡಿಯ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ತಾಲ್ಲೂಕು ಆಡಳಿತ ಸಿಬ್ಬಂದಿ ಮಾರುತಿ ಪಾಟೀಲ್, ಎಸ್ಸೆಸ್ ಬಿ ಸೇನಾ ಭದ್ರತಾ ಸಿಬ್ಬಂದಿ ಕಾಳುಸಿಂಗ ಎಂಬುವವರು ಘಟನೆಯಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಿಪ್ಪಾಣಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚೆಕ್ ಪೋಸ್ಟ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ, ಗಾಳಿಯ ಅಬ್ಬರ ಶುರುವಾಗಿದೆ. ಈ ಸಂದರ್ಭದಲ್ಲಿ ಚೆಕ್ ಪೊಸ್ಟ್ ಛಾವಣಿ ಕುಸಿದು ಬಿದ್ದಿದೆ. ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ.







