ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೇ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರದಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.