ಬೆಂಗಳೂರು : ಉತ್ತರ ಕರ್ನಾಟಕದಲ್ಲಿ ರಣ ರಣ ಬಿಸಿಲಿದ್ದರೆ, ಬೆಂಗಳೂರಿಗೆ ವರುಣ ತಂಪೆರೆದಿದ್ದಾನೆ. ದಕ್ಷಿಣ ಒಳನಾಡಿನಲ್ಲಿ ಮಳೆಯಾದರೆ (Rain) ಕರಾವಳಿ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಬೆಂಗಳೂರಿನಲ್ಲಿ (Bengaluru) ಸೋಮವಾರ ರಾತ್ರಿ ಜೋರಾಗಿ ಮಳೆ ಸುರಿದಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ತಿಳಿಸಿದೆ.
ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಮಳೆ/ಗುಡುತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಉಷ್ಣಾಂಶ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.








