Heavy Rain | ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ : ಶಾಲೆಗಳಿಗೆ ರಜೆ ಘೋಷಣೆ
ಧಾರವಾಡ : ರಾಜ್ಯದಲ್ಲಿ ಕಳೆದ ಒಂದು ವಾರದಿಂದ Heavy Rain ಭಾರಿ ಮಳೆಯಾಗುತ್ತಿದ್ದು, ಧಾರವಾಡ ಜಿಲ್ಲೆಯಲ್ಲಿ ಭಾರಿ ವರ್ಷಧಾರೆಯಾಗುತ್ತಿದೆ.
ಅದರಲ್ಲೂ ಜಿಲ್ಲೆಯ ಅಳ್ನಾವರ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.
ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ಹಲವು ಅನಾಹುತಗಳು ಸಂಭವಿಸುತ್ತಿವೆ.
ಅತಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಆಳ್ನಾವರ ತಾಲೂಕಿನ ಮೂರು ಶಾಲೆಗಳಿಗೆ ರಜೆ ಘೊಷಣೆ ಮಾಡಲಾಗಿದೆ.

ತಾಲೂಕಿನ ಹುಲಿಕೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಪ್ರೌಡಶಾಲೆ, ಮತ್ತು ಉರ್ದು ಶಾಲೆಗೆ ಅಳ್ನಾವರ ಬಿಇಓ ಬೊಮ್ಮಕ್ಕನವರು ರಜೆ ಘೋಷಣೆ ಮಾಡಿದ್ದಾರೆ.
ಇನ್ನು ರಾಜ್ಯದ ಕೊಡಗು, ಚಿಕ್ಕಮಗಳೂರು, ಮಂಡ್ಯ ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ Heavy Rain ಧಾರಾಕಾರ ಮಳೆ ಮುಂದುವರಿದಿದ್ದು, ದೇಗುಲ, ಮಂಟಪಗಳು ಮುಳುಗಡೆಯಾಗಿವೆ.
ಈ ನಡುವೆ ಮುಂದಿನ 48 ಗಂಟೆಗಳಲ್ಲಿ ಕಲಬುರ್ಗಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಹಾಸನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.