ಕರ್ನಾಟಕದಲ್ಲಿ ಸೆಪ್ಟೆಂಬರ್ 3 ರಂದು ಭಾರೀ ಮಳೆಯಾಗುವ ಸಂಭವ – ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು, ಅಗಸ್ಟ್31: ಕರ್ನಾಟಕದಲ್ಲಿ ಸೆಪ್ಟೆಂಬರ್ 3 ರಂದು ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 3 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನ ಸುತ್ತ ಮುತ್ತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ನಗರದ ಬಹುತೇಕ ಭಾಗ ಹಾಗೂ ಬೆಂಗಳೂರು ಹೊರವಲಯದ ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಮುಂತಾದ ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ನಾಳೆ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಬಹುದೆಂದು ಅಂದಾಜಿಸಲಾಗಿದ್ದು ಸೆಪ್ಟೆಂಬರ್ 2 ಮತ್ತು ಸೆಪ್ಟೆಂಬರ್ 3 ರಂದು ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.








