ರಾಜ್ಯದ ಹಲವು ಭಾಗಗಳಲ್ಲಿ ಅ.17ರವರೆಗೆ ಭಾರೀ ಮಳೆ Heavy rains saaksha tv
ಬೆಂಗಳೂರು : ರಾಜ್ಯ ಹಲವು ಭಾಗಗಳಲ್ಲಿ ಅಕ್ಟೋಬರ್ 17ರವರೆಗೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ಮಂಗಳೂರಿನಲ್ಲಿ ಭರ್ಜರಿ ಮಳೆ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಸದ್ಯ ಈ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರೆದಿದ್ದು, ಅಲ್ಲಲ್ಲಿ ಮಳೆ ತುಂತುರು ಮಳೆಯಾಗುತ್ತಿದೆ.
ಇತ್ತ ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ ಶುರುವಾಗಿದ್ದು, ಎರಡು ಗಂಟೆಗಳ ಕಾಲ ಧಾರಕಾರವಾಗಿ ಮಳೆ ಸುರಿದಿದೆ.









