ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು, ನಾಳೆ ಭಾರಿ ಮಳೆ Heavy rains saaksha tv
ಬೆಂಗಳೂರು : ಸದ್ಯ ರಾಜ್ಯದಲ್ಲಿ ಭಾರಿ ವರ್ಷಧಾರೆ ಆಗುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಮೇಘಸ್ಫೋಟವಾದಂತೆ ವರುಣ ಆರ್ಭಟಿಸಿದ್ದ.
ಗಾಳಿ ಸಹಿತ ಮಳೆಗೆ ಸಿಲಿಕಾನ್ ಸಿಟಿ ಕಂಗಾಲಾಗಿತ್ತು. ರಸ್ತೆಗಳೆಲ್ಲಾ ಕೆರೆಗಳಂತಾಗಿ, ವಾಹನ ಸವಾರರು ಪರದಾಡುವಂತಾಗಿತ್ತು.
ಇದರ ಮಧ್ಯೆ ಇಂದು ಮತ್ತು ನಾಳೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ತಿಂಗಳ 26 ರಂದು ರಾಜ್ಯಕ್ಕೆ ಪೂರ್ಣ ಪ್ರಮಾಣದ ಹಿಂಗಾರು ಪ್ರವೇಶಿಸಲಿದೆ.
ಆದ್ರೂ ದಕ್ಷಿಣ ಒಳನಾಡಿನ ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ,
ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.