ನವದೆಹಲಿ: ರಾಷ್ಟ್ರ ರಾಜಧಾನಿ (Delhi)ಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜನ -ಜೀವನ ಅಸ್ತವ್ಯಸ್ಥಗೊಂಡಿದೆ. ಅಲ್ಲದೇ, ಇನ್ನೂ ಮೂರು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಮೂರು ದಿನಗಳ ಕಾಲ ಹೈ-ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ಹೇಳಿದೆ.
ಮುಂದಿನ ಮೂರು ದಿನಗಳ ಕಾಲ ದೆಹಲಿ, ಉತ್ತರಪ್ರದೇಶ (Uttarpradesh) ಹಾಗೂ ಉತ್ತರಾಖಂಡದಲ್ಲಿ (Uttarakhand) ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡದಲ್ಲಿ ಸೆ.12 ರಿಂದ 14 ರವರೆಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ವ್ಯಾಪಕ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದೆಹಲಿ, ಉತ್ತರಪ್ರದೇಶ ಹಾಗೂ ಉತ್ತರಾಖಂಡ ಹೊರತುಪಡಿಸಿ, ಮಧ್ಯಪ್ರದೇಶದಲ್ಲಿ (Madhyapradesh) ಸೆ.14ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ಸೆ.15ರವರೆಗೆ ಪೂರ್ವ ರಾಜಸ್ಥಾನದಲ್ಲಿ (Rajasthan) ಮಳೆಯನ್ನು ನಿರೀಕ್ಷಿಸಲಾಗಿದೆ ಎಂದು ಐಎಂಡಿ (IMD) ಹೇಳಿದೆ.