Heavy rain | ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆ : ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಪ್ರಮಾಣದ ಮಳೆಯಾಗುತ್ತಿದೆ.
ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ದಕ್ಷಿಣ ಒಳನಾಡಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ಚಿತ್ರದುರ್ಗ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದಲ್ಲದೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಈ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.