Heavy Rain | ರಾಜ್ಯದಲ್ಲಿ ಇನ್ನೂ ಐದು ದಿನ ಭಾರಿ ಮಳೆ
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ರಾಜ್ಯದಲ್ಲಿ ಇನ್ನೂ ಐದು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯ ರಾಜ್ಯಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಭಾರಿ ವರ್ಷಧಾರೆಯಾಗಲಿದೆ.
ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಿನ್ನೆ ಬೆಂಗಳೂರಿನ 8 ವಲಯದಲ್ಲಿ ಧೋ ಎಂದು ಮಳೆಯಾಗಿದ್ದು, ಯಲಹಂಕ 75.5 ಮಿ.ಮೀ, ಅಟ್ಟೂರು 70 ಮಿ.ಮೀ, ಚೌಡೇಶ್ವರಿ ವಾರ್ಡ್ 67.5 ಮಿ.ಮೀ, ಆರ್ ಆರ್ ನಗರ 66.5 ಮಿ.ಮೀ, ಸಂಪರಿರಾಮನಗರದಲ್ಲಿ 66 ಮಿ.ಮೀ ಮಳೆಯಾಗಿದೆ.
ಈಗಾಗಲೇ ಮಳೆಯಿಂದಾಗಿ ಬರ್ಬಾದ್ ಆಗಿರುವ ಬೆಂಗಳೂರಿನಲ್ಲಿ ಇನ್ನೈದು ದಿನಗಳ ಕಾಲ ಭಾರಿ ಮಳೆಯಾಗಲಿದೆ.
ಮುಂದಿನ 24 ಗಂಟೆಗಳಲ್ಲಿ ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.