ಬೆಂಗಳೂರು : ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಈ ಹಿನ್ನೆಲೆ ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಆಗಸ್ಟ್ 14ರವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಆ.13ರವರೆಗೂ ರೆಡ್ ಅಲರ್ಟ್ ಹಾಗೂ ಚಾಮರಾಜನಗರ, ಚಿತ್ರದುರ್ಗ, ಮೈಸೂರು, ತುಮಕೂರು, ಬೀದರ್, ಕಲಬುರಗಿ, ರಾಯಚೂರು, ಮತ್ತು ಯಾದಗಿರಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಭಾರಿ ಮಳೆ ಹಿನ್ನೆಲೆ ಕರಾವಳಿ ಭಾಗದಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಂಗಳೂರು, ಕಾರವಾರ ಸಮುದ್ರದಲ್ಲಿ ಎತ್ತರದ ಅಲೆಗಳು ಅಪ್ಪಳಿಸಲಿದ್ದು, ಅಕ್ಕಪಕ್ಕದ ಗ್ರಾಮಗಳ ಜನರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.
ಆ.11ರಂದು ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗುವ ಲಕ್ಷಣವಿರುವುದರಿಂದ ಆರೆಂಜ್ ಅಲರ್ಟ್ ಹಾಗೂ ಆ.12 ಮತ್ತು 13ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.








