ಆ.11 ರವರೆಗೂ ರಾಜ್ಯದಲ್ಲಿ ಭಾರಿ ಮಳೆ Heavy rain saaksha tv
ಬೆಂಗಳೂರು : ಆಗಸ್ಟ್ 11 ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದಲ್ಲದೆ ಮುಂಗಾರಿನ ಪ್ರಭಾವದಿಂದ ಮುಂದಿನ ಐದು ದಿನಗಳವರೆಗೂ ರಾಜ್ಯದಲ್ಲಿ ಅಧಿಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆ ಇದ್ದು, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಕಳೆದ 24 ಗಂಟೆಯಲ್ಲಿ ಬೆಂಗಳೂರಿನ ಬೊಮ್ಮನಹಳ್ಳಿಯ ಸಿಂಗಸಂದ್ರದಲ್ಲಿ 13 ಮಿ.ಮೀ. ಮಳೆಯಾಗಿದೆ. ಅದೇ ರೀತಿ ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ರೆಂಜಾಳದಲ್ಲಿ 120 ಮಿ.ಮೀ. ಮಳೆಯಾಗಿದೆ.