ನವೆಂಬರ್ ಏಳರವರೆಗೂ ರಾಜ್ಯದಲ್ಲಿ ಭಾರಿ ಮಳೆ

1 min read
karnataka saaksha tv

ನವೆಂಬರ್ ಏಳರವರೆಗೂ ರಾಜ್ಯದಲ್ಲಿ ಭಾರಿ ಮಳೆ Heavy rain saaksha tv

ಬೆಂಗಳೂರು : ಇಂದಿನಿಂದ ನವೆಂಬರ್ ಏಳನೇ ತಾರೀಕಿನ ವರೆಗೂ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಮತ್ತು ನಾಳೆ ರಾಜ್ಯದ ಕರಾವಳಿ ಭಾಗದ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿಯಲ್ಲಿ ನವೆಂಬರ್ 7ರವರೆಗೂ ಭಾರಿ ವರ್ಷಧಾರೆಯ ಸಾಧ್ಯತೆಗಳಿವೆ.

Heavy rain saaksha tv

ಈ ಹಿನ್ನೆಲೆಯಲ್ಲಿ ಈ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆಮ

ಇಲ್ಲದೇ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,

ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,

ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗು ತುಮಕೂರು ಜಿಲ್ಲೆಗಳಲ್ಲಿ ಭಾನುವಾರದವರೆಗೂ ಗುಡುಗು ಸಿಡಿಲಿನ ಸಮೇತ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲೂ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd