ರಾಜ್ಯದಲ್ಲಿ ಇಂದು-ನಾಳೆ ಭಾರಿ ಮಳೆ ಸಾಧ್ಯತೆ
ಬೆಂಗಳೂರು : ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಮತ್ತು ನಾಳೆ ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ವರ್ಷಧಾರೆಯಾಗುವ ಸಾಧ್ಯತೆ ಇದೆ.
ಇವತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮಿಂಚು, ಗಾಳಿ, ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ.
ಇತ್ತ ಉತ್ತರ ಕನ್ನಡ, ಬೀದರ್, ಕಲಬುರ್ಗಿ, ವಿಜಯಪುರ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವರುಣ ಆರ್ಭಟಿಸಲಿದ್ದಾನೆ.
ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದಲ್ಲದೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6 ರವರೆಗೂ ಭಾರಿ ವರ್ಷಧಾರೆ ಆಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.