Heavy Rain | ವಿಜಯಪುರದಲ್ಲಿ ಭಾರಿ ಮಳೆ – ರಸ್ತೆ ಸಂಪರ್ಕ ಕಡಿತ
ವಿಜಯಪುರ : ಜಿಲ್ಲೆಯಲ್ಲಿ ಮತ್ತೆ ವರುಣನ ಅಬ್ಬರ ಜೋರಾಗಿದ್ದು, ತಡರಾತ್ರಿ ಸುರಿದ ಮಳೆಗೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ.
ಇದರಿಂದ ಚವನಭಾವಿ ನಾಲತವಾಡ ರಸ್ತೆ ಸಂಪರ್ಕ ಬಂದ್ ಆಗಿದೆ.
ಇದರಿಂದ ಅಂಬುಲೆನ್ಸ್ ಹೋಗಲು ತೊಂದರೆಯಾಗಿದೆ.
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಚವನಭಾವಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಭಾರಿ ಮಳೆಯಿಂದಾಗಿ ತಾಳಿಕೋಟಿ, ಚವನಭಾವಿ, ನಾಲತವಾಡ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಇದರಿಂದ ಜನರು ಕೂಡ ಪರದಾಡುತ್ತಿದ್ದಾರೆ.
ಸದ್ಯ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾದೆ.
ಅಲ್ಲಲ್ಲಿ ಗುಡುಗು ಮಿಂಚಿನ ಮಳೆಯಾಗುತ್ತಿದೆ.







