ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಭಾರಿ ಮಳೆ ಸಾಧ್ಯತೆ ಇದ್ದು, ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ 115 ಮಿ.ಮೀ ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರ ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಅಲ್ಲದೆ ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರಬೇಕು. ಸಾರ್ವಜನಿಕರು ನದಿ, ಸಮುದ್ರಗಳಿಗೆ ಇಳಿಯಬಾರದು ಎಂದು ಪ್ರಾಧಿಕಾರ ಸೂಚನೆ ನೀಡಿದೆ.