Heavy Rain | ಕರಾವಳಿ ಭಾಗದಲ್ಲಿ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ
ರಾಜ್ಯದ ಕರಾವಳಿ ಭಾಗ ಮತ್ತು ಮಲೆನಾಡು ಪ್ರದೇಶದ ಜೊತೆಗೆ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು,ಶಿವಮೊಗ್ಗ, ಹಾಸನ್, ಬೆಳಗಾವಿ,ವಿಜಯಪುರ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಭಾರಿ ವರ್ಷಧಾರೆಯಾಗಿದೆ.
ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಇಂದಿನಿಂದ ಜುಲೈ 9 ರ ವರೆಗೂ ಕರಾವಳಿ ಭಾಗದಲ್ಲಿ ಭಾರಿ ಮಳೆ Heavy Rain ಸಾಧ್ಯತೆ ಇದೆ.
ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಧಾರಾಕಾರ Heavy Rain ಮಳೆಯಾಗುತ್ತಿದ್ದು, ನಾನಾ ಅವಾಂತರಗಳು ಸೃಷ್ಠಿಯಾಗಿವೆ.
ಭಾಗಮಂಡಲ – ತಲಕಾವೇರಿ ರಸ್ತೆ ಮೇಲೆ ಬಂಡೆ ಉರುಳಿ ಬಿದ್ದಿದೆ.
ಗಾಳಿ ಮಳೆಗೆ ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು, ರಾತ್ರಿಯಿಂದಲೇ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.
ಇನ್ನು 2ನೇ ಮೊಣ್ಣಂಗೇರಿ – ರಾಮಕೊಲ್ಲಿ ಸಂಪರ್ಕ ಕಲ್ಪಿಸುವ ಸೇತುವೆ ಬಿರುಕು ಬಿಟ್ಟಿದೆ.
ದಕ್ಷಿಣ ಕನ್ನಡದ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟ ಮುಳುಗಡೆಯಾಗಿದೆ.
ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಸೋಮವಾರ ಬೆಳಗ್ಗೆ 8.30ರವರೆಗೆ ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 7.17 ಸೆಂ.ಮೀ ಮಳೆ ದಾಖಲಾಗಿದೆ.