ಬೆಂಗಳೂರು: ರಾಜ್ಯದ ಹಲವೆಡೆ ಈಗಾಗಲೇ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಮುಂಗಾರು ಅಬ್ಬರಕ್ಕೆ ಜನ ಹೈರಾಣಾಗಿ ಹೋಗಿದ್ದಾರೆ. ಈ ಮಧ್ಯೆ ಇನ್ನೂ ಎರಡು ದಿನ ಇದೇ ರೀತಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಸೇರಿದಂತೆ ಮಲೆನಾಡು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರೀ ಮಳೆಯಾಗುವ (Heavy Rain) ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.
ಬೆಂಗಳೂರಿನಲ್ಲಿ (Bengaluru) ಎರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು, ನಗರದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನುಳಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.
ಕರಾವಳಿ ಭಾಗದಲ್ಲಿ ಗಂಟೆಗೆ 35-55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.








