ಕಾಬೂಲ್: ಅಪ್ಘಾನಿಸ್ತಾನದಲ್ಲಿ ಕಳೆದ ಮೂರು ದಿನಗಳಿಂದ ಭೀಕರ ಹಿಮಪಾತವಾಗುತ್ತಿದ್ದು, 15 ಜನ ಸಾವನ್ನಪ್ಪಿ, 30 ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ವರದಿಯಂತೆ, ಬಾಲ್ಖ್ ಮತ್ತು ಫರಿಯಾಬ್ ಪ್ರಾಂತ್ಯಗಳಲ್ಲಿ ಸುಮಾರು 10 ಸಾವಿರ ಪ್ರಾಣಿಗಳು ಕೂಡ ಸಾವನ್ನಪ್ಪಿವೆ ಎನ್ನಲಾಗಿದೆ. ಹೀಗಾಗಿ ಹೆಚ್ಚು ಜನಸಂಖ್ಯೆ ಇರುವ ಪ್ರದೇಶಗಳಲ್ಲಿ ಆತಂಕ ಮನೆ ಮಾಡುತ್ತಿದೆ. ಹೀಗಾಗಿ ಅನೇಕ ರಸ್ತೆಗಳನ್ನು ನಿರ್ಬಂಧಿಸಲಾಗಿದೆ.
ಈ ಹಿನ್ನೆಲೆಯಲ್ಲಿ ರಸ್ತೆ ಬಂದ್ ಆಗಿ ಸಂಪರ್ಕ ಸಾಧ್ಯವಾಗುತ್ತಿಲ್ಲ. ಜನರು ಸರ್ಕಾರದ ನರೆವಿಗಾಗಿ ಕಾಯುತ್ತಿದ್ದಾರೆ. ಬಾಲ್ಖ್, ಜಾವ್ಜಾನ್, ಬದ್ಘಿಸ್, ಫರಿಯಾಬ್ ಮತ್ತು ಹೆರಾತ್ ಪ್ರಾಂತ್ಯಗಳಲ್ಲಿ ಅಧಿಕಾರಿಗಳನ್ನು ನೇಮಿಸಲಾಗಿದೆ.