ಗ್ಯಾಂಗ್ಟಾಕ್ : ಭಾರೀ ಹಿಮಪಾತ(Avalanche) ಉಂಟಾದ ಪರಿಣಾಮ 6 ಜನ ಪ್ರವಾಸಿಗರು ಸಾವನ್ನಪ್ಪಿ, 11 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಕ್ಕಿಂನ (Sikkim) ನಾಥುಲಾ (Nathula) ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಭಾರತ-ಚೀನಾ ಗಡಿಯ ಸಮೀಪವಿರುವ ಎತ್ತರದ ಪರ್ವತದ ರಸ್ತೆ ನಾಥುಲಾ ಹತ್ತಿರಈ ಘಟನೆ ನಡೆದಿದ್ದು, ಈ ಪ್ರದೇಶ ಸಮುದ್ರ ಮಟ್ಟದಿಂದ 4,310 ಮೀ. (14,140 ಅಡಿ) ಎತ್ತರದಲ್ಲಿದೆ ಮತ್ತು ಇದು ಪ್ರಮುಖ ಪ್ರವಾಸಿ ತಾಣವಾಗಿದೆ. 150ಕ್ಕೂ ಹೆಚ್ಚು ಪ್ರವಾಸಿಗರು 15 ಮೈಲುಗಳಷ್ಟು ಮುಂದೆ ಸಾಗಿದ್ದು, ಅಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಸುಮಾರು 30 ಜನರನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ರಾಜ್ಯ ರಾಜಧಾನಿ ಗ್ಯಾಂಗ್ಟನ್ನ ಆಸ್ಪತ್ರೆಗೆ ಕರೆತರಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ
ನಾಪತ್ತೆಯಾದವರ ಹುಡುಕಾಟದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದೆ.








