ರಾಜ್ಯದಲ್ಲಿ ಮುಂದುವರೆಯಲಿದೆ ವರುಣನ ಆರ್ಭಟ – ಬೆಂಗಳೂರಿನಲ್ಲೂ 2 ದಿನ ಭಾರೀ ಮಳೆ : ಯಾವೆಲ್ಲಾ ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’..!
ಬೆಂಗಳೂರು: ತೌಕ್ತೆ ಚಂಡಮಾರುತದ ಹೊಡೆತದಿಂದ ರಾಜ್ಯದ ಕರಾವಳಿ , ಮಲೆ ನಾಡು ಭಾಗಗಳ ಜನರು ತತ್ತರಿಸಿಹೋಗಿದ್ದಾರೆ. ಕರಾವಳಿ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು ಇನ್ನೂ 3 ದಿನಗಳ ಕಾಲ ಹೀಯೆಗೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ ಬೆಂಗಳೂರಿನಲ್ಲೂ ಮುಂದಿನ ಎರಡು ದಿನ ಬೆಂಗಳೂರಿನಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಇದಲ್ಲದೆ, ಕರಾವಳಿಯಲ್ಲಿ ಮೇ 21 ರವರೆಗೂ ಮಳೆ ಮುಂದುವರಿಯಲಿದೆ. ಕರಾವಳಿ ಭಾಗದಲ್ಲಿ ಚಂಡಮಾರುತದ ಅಬ್ಬರ ತುಸು ಕಡಿಮೆಯಾಗಿದೆ. ಆದರೂ, ಮುಂದಿನ ಎರಡು ದಿನ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ.
ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಮುಂದುವರಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಮಳೆ ತಗ್ಗಿದ್ದು, ಗುಡುಗು ಮತ್ತು ಸಿಡಿಲು ಹೆಚ್ಚಾಗಿ ಇರಲಿದೆ. ಕೆಲವು ಜಿಲ್ಲೆಗಳಲ್ಲಿ ಮೇ 22ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದೂ ಮಾಹಿತಿ ನೀಡಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








