ಗದಗ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ (International Democracy Day) ಹಿನ್ನೆಲೆಯಲ್ಲಿ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿ ನಡೆದಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರು ಗ್ರಾಮದಲ್ಲಿ ನಡೆದಿದೆ. ಬೀದರ್ ನಿಂದ (Bidar) ಚಾಮರಾಜನಗರದವರೆಗೆ (Chamarajanagar) ರಾಜ್ಯದ ಅತಿ ಉದ್ದದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.
ಘಟನೆಯಲ್ಲಿ ಶಿಗ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ಸರಸ್ವತಿ ಗುಡಿಸಾಗರ ಹಾಗೂ ಸರೋಜಾ ದಿಂಡೂರು ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಇಬ್ಬರೂ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ಮುಖ, ತಲೆ, ಮೈ, ಕೈಗೆ ತೀವ್ರವಾಗಿ ಕಚ್ಚಿವೆ. ನೋವಿನ್ನು ಸಹಿಸಲಾಗದೇ ಅಸ್ವಸ್ಥಗೊಂಡಿದ್ದಾರೆ.
ಕೂಡಲೇ ಇಬ್ಬರೂ ಶಿಕ್ಷಕಿಯರಿಗೆ ಶಾಸಕ ಡಾ. ಚಂದ್ರು ಲಮಾಣಿ ಅವರು ತಮ್ಮ ಕಾರಿನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದರು. ನಂತರ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಯಿತು.