ಡೆಹ್ರಾಡೂನ್: ಖಾಸಗಿ ಹೆಲಿಕಾಪ್ಟರ್ (Private Helicopter) ಪತನಗೊಂಡ ಘಟನೆ ಉತ್ತರಾಖಂಡದ ಕೇದಾರನಾಥದಲ್ಲಿ (Uttarakhand Kedarnath) ನಡೆದಿದೆ.
ಹಿಂದೆ ಉತ್ತರಾಖಂಡದ ಕೇದಾರನಾಥ ಧಾಮದಲ್ಲಿ ಲ್ಯಾಂಡಿಂಗ್ ಸಮಯದಲ್ಲಿ ಹಾನಿಗೊಳಗಾದ ಹೆಲಿಕಾಪ್ಟರ್ ನ್ನು ವಾಯುಸೇನೆಯ MI-17 ಹೆಲಿಕಾಪ್ಟರ್ ಎತ್ತಿಕೊಂಡು ಸಾಗುತ್ತಿತ್ತು. ಆಗ ಹೆಲಿಕಾಪ್ಟರ್ ಜಾರಿ ಬಿದ್ದು ಮಂದಾಕಿನಿ ನದಿಯ (Mandakini River) ಹತ್ತಿರ ಪತನಾವಿಗೆ. ಅಪಘಾತದಲ್ಲಿ ಗಾಯಗೊಂಡಿರುವ ಕುರಿತು ಯಾವುದೇ ಮಾಹಿತಿ ಸಿಕ್ಕಿಲ್ಲ.
ಹೆಲಿಕಾಪ್ಟರ್ ಪತನಗೊಳ್ಳುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಳೆಯಿಂದಾಗಿ ಖಾಸಗಿ ಕಂಪನಿ ನಿರ್ವಹಿಸುತ್ತಿದ್ದ ಹೆಲಿಕಾಪ್ಟರ್ ಹಾಳಾಗಿತ್ತು. ಈ ಹೆಲಿಕಾಪ್ಟರ್ ಅನ್ನು ದುರಸ್ತಿಗಾಗಿ ವಾಯುಸೇನೆಯ ಹೆಲಿಕಾಪ್ಟರ್ ಮೂಲಕ ಏರ್ ಲಿಫ್ಟ್ ಮಾಡಿ ತೆಗೆದುಕೊಂಡು ಹೋಗುತ್ತಿತ್ತು. ಆಗ ಅದು ಆಯತಪ್ಪಿ ಕೆಳಗೆ ಬಿದ್ದಿದೆ ಎಂದು ತಿಳಿದು ಬಂದಿದೆ.








