ರಾಜ್ಯದಲ್ಲಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ನಾಲ್ಕು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ-Helmet mandatory children
ಬೆಂಗಳೂರು, ಅಕ್ಟೋಬರ್ 20: ಕರ್ನಾಟಕದಲ್ಲಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ನಾಲ್ಕು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ.
ಹೆಲ್ಮೆಟ್ ಧರಿಸದಿದ್ದರೆ ಚಾಲನಾ ಪರವಾನಗಿಯನ್ನು 3 ತಿಂಗಳ ಅಮಾನತುಗೊಳಿಸುವುದರ ಜೊತೆಗೆ ಉಲ್ಲಂಘನೆಯ ಸಂದರ್ಭದಲ್ಲಿ ದಂಡವನ್ನು ರಾಜ್ಯ ಸರ್ಕಾರ ವಿಧಿಸಲಿದೆ.
ಕೇಂದ್ರ ಮೋಟಾರು ವಾಹನ ಕಾಯ್ದೆಯ ಅನ್ವಯ ದ್ವಿಚಕ್ರವಾಹನ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ. Helmet mandatory children
ಸುಳ್ಳು ದಾಖಲೆಗಳನ್ನು ನೀಡಿ ಕರ್ಣಾಟಕ ಬ್ಯಾಂಕ್ ಗೆ ಕೋಟ್ಯಾಂತರ ರೂ ವಂಚಿಸಿದ ದಂಪತಿಗಳು
ಸುಪ್ರೀಂ ಕೋರ್ಟ್ ರಸ್ತೆ ಸುರಕ್ಷತಾ ಸಮಿತಿ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ ದ್ವಿಚಕ್ರವಾಹನದಲ್ಲಿ ಪ್ರಯಾಣಿಸುವಾಗ ನಾಲ್ಕು ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶಿಸಲಾಗಿದೆ.
ಮೋಟಾರು ವಾಹನ ಕಾಯ್ದೆಗೆ ಇತ್ತೀಚಿನ ತಿದ್ದುಪಡಿಗಳಲ್ಲಿ, 4 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳು ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವಾಗ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಿದ್ದು ಈ ನಿಯಮದಿಂದ ಟರ್ಬನ್ ಧರಿಸಿದ ಸಿಖ್ಖರಿಗೆ ವಿನಾಯಿತಿ ನೀಡಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ