ಬೆಂಗಳೂರು: ಇನ್ನು ಮುಂದೆ 6 ವರ್ಷದ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಬೈಕ್ ನಲ್ಲಿ ತೆರಳುವ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮಾಡಿದ್ದು, ಶಾಲೆಗೆ ತೆರಳುವ ಮಕ್ಕಳ ಸುರಕ್ಷಿತವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಕ್ಕಳನ್ನು ಶಾಲೆಗೆ ಬಿಡುವ ಹಾಗೂ ಕರೆದುಕೊಂಡು ಹೋಗುವಾಗ ಪಾಲಕರು ಮಕ್ಕಳಿಗೆ ಹಾಗೂ ತಮಗೆ ಹೆಲ್ಮೆಟ್ ಇಲ್ಲದೆ ಬರುತ್ತಿದ್ದಾರೆ. ಶಾಲಾ ಅಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿ ನಿಗದಿತ ಮಕ್ಕಳಿಗಿಂತ ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಸಾಕಷ್ಟು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ನಿರ್ಧಾರ ಕೈಗೊಂಡಿದೆ.
ಶಾಲೆಗೆ ಬಿಡಲು ಬರುವ ಪೋಷಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. 6 ವರ್ಷ ಮೇಲ್ಪಟ್ಟ ಮಕ್ಕಳು ಸಹ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಖಾಸಗಿ ವಾಹನಗಳಲ್ಲಿ ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ.