ಮಂಡ್ಯ: ಹೆಮ್ಮಾರಿ ಕೊರೊನಾ ಕೊರೊನಾ ವಾರಿಯರ್ಸ್‍ಗಳನ್ನೂ ಬಿಡುತ್ತಿಲ್ಲ ಎಂಬುದಕ್ಕೆ ಮಂಡ್ಯ ಜಿಲ್ಲೆ ಕೆ.ಆರ್ ಪೇಟೆಯ ವೈದ್ಯ ಡಾ.ವಿನಯ್ ಸಾವು ಜ್ವಲಂತ ನಿದರ್ಶನವಾಗಿದೆ.
ಕೆ.ಆರ್.ಪೇಟೆ ತಾಲೂಕಿನ ಬಳ್ಳೇಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾಗಿದ್ದ ಡಾ.ವಿನಯ್(58)ಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೋವಿಡ್ ಕೇರ್ ಸೆಂಟರ್‍ಗೆ ವೈದ್ಯ ಡಾ.ವಿನಯ್ ದಾಖಲಾಗಿದ್ದರು. ಆದರೆ, ಆರೋಗ್ಯದಲ್ಲಿ ಏರುಪೇರು ಆದ ಕಾರಣ ಮೈಸೂರಿನ ಮೈಸೂರಿನ ಕೊವಿಡ್ ಕೇರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಡಾ.ವಿನಯ್‍ಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಡಾ.ವಿನಯ್ ಸಾವನ್ನಪ್ಪಿದ್ದಾರೆ.








