ಬಳ್ಳಾರಿ: ಮಹಿಳೆಯೊಬ್ಬರು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು ದುಡ್ಡಿದ್ದ ಹಲವರನ್ನು ವಂಚಿಸಿರುವ ಘಟನೆ ನಡೆದಿದೆ.
ಈ ಮಹಿಳೆ ಮದುವೆಯಾಗುವುದಾಗಿ ವಂಚಿಸಿ(Fraud Case) ರುವ ಪ್ರಕರಣ ಬಳ್ಳಾರಿಯಲ್ಲಿ (Bellary) ನಡೆದಿದೆ. ಇದರೊಂದಿಗೆ ಲೋನ್ ಕೊಡಿಸುವುದಾಗಿ ಮಹಿಳೆ ಕೋಟಿ ಕೋಟಿ ರೂ. ವಂಚಿಸಿದ್ದಾಳೆ ಎಂದು ಕೂಡ ತಿಳಿದು ಬಂದಿದೆ.
ಉಡುಪಿ ನಿವಾಸಿ ತಬುಸುಮ್ ತಾಜ್ (40) ಈ ಖತರ್ನಾಕ್ ಮಹಿಳೆ. ಈಕೆ ಇಲ್ಲಿಯವರೆಗೂ 8 ಜನರನ್ನು ಮದುವೆಯಾಗಿ ವಂಚಿಸಿದ್ದಾಳೆ ಎನ್ನಲಾಗಿದೆ. ಪತ್ನಿಯಿಂದ ದೂರ ಇದ್ದ ಶ್ರೀಮಂತರನ್ನೇ ಟಾರ್ಗೆಟ್ ಮಾಡಿ, ವಂಚಿಸುತ್ತಿದ್ದಳು ಎನ್ನಲಾಗಿದೆ.
ಹೀನಾ ಎಂಟರ್ಪ್ರೈಸಸ್ ಎಂಬ ಆಫೀಸ್ ಮಾಡಿಕೊಂಡು ಮುದ್ರಾ ಲೋನ್, ಸರ್ಕಾರಿ ನೌಕರಿ, ಮೈನಾರಿಟಿ ಲೋನ್, ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಕೊಡಿಸುತ್ತೇವೆಂದು ಹೇಳಿಕೊಂಡು ಜನರನ್ನು ವಂಚಿಸುವ ಕಾಯಕ ಮಾಡಿಕೊಂಡಿದ್ದಳು ಎನ್ನಲಾಗಿದೆ. ಯು.ಟಿ. ಖಾದರ್ ಬಳಿ ಬ್ಲ್ಯಾಕ್ ಮನಿ ಇದೆ. ಅದನ್ನ ವೈಟ್ ಮಾಡಲು ಈ ಬ್ಯುಸಿನೆಸ್ ಮಾಡುತ್ತಿದ್ದೇವೆ ಎಂದು ಜನರನ್ನು ನಂಬಿಸಿದ್ದಳು. 1 ಕೋಟಿ ರೂ. ಲೋನ್ ಬೇಕಾದರೆ 15 ಲಕ್ಷ ರೂ. ಕೊಡಬೇಕು ಎಂದು ಬೇಡಿಕೆ ಇಟ್ಟು ಯಾಮಾರಿಸುತ್ತಿದ್ದಳು ಎನ್ನಲಾಗಿದೆ. 38 ಕೋಟಿ ರೂ.ಗೂ ಅಧಿಕ ಹಣವನ್ನು ಸಾವಿರಾರು ಜನರಿಗೆ ಮೋಸ ಮಾಡಿದ್ದಾಳೆ ಎಂಬುದು ತಿಳಿದು ಬಂದಿದೆ. ಯಾರಾದರೂ ಮರಳಿ ದುಡ್ಡು ನೀಡಿದರೆ, ಕೇಸ್ ದಾಖಲಿಸುತ್ತೇನೆಂದು ಹೆದರಿಸುತ್ತಿದ್ದಳು ಎನ್ನಲಾಗಿದೆ. ಚೆಕ್ ಬೌನ್ಸ್ ಕೇಸ್ ದಾಖಲಿಸುವ ಬೆದರಿಕೆಯನ್ನು ಹಾಕಿದ್ದಳು ಎನ್ನಲಾಗಿದೆ. ಈಗ ಈ ಮಹಿಳೆಯ ಮೇಲೆ ಹಲವಾರು ದೂರುಗಳು ದಾಖಲಾಗಿವೆ ಎನ್ನಲಾಗಿದೆ.








