ಕೊರೊನಾ ಲಾಕ್ ಡೌನ್ ಸಮಯದಲ್ಲಿ ಅದೆಷ್ಟೋ ಚಿತ್ರಗಳ ಶೂಟಿಂಗ್ ಅರ್ಧದಲ್ಲೇ ನಿಂತು ಹೋಗಿತ್ತು. ಆದರೆ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಅವರು ಸದ್ದಿಲ್ಲದೇ ಒಂದು ಸಿನಿಮಾ ಮಾಡಿ ಮುಗಿಸಿದ್ದು, ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಸಹ ರಿಲೀಸ್ ಆಗಿ ಬಾರೀ ಸದ್ದು ಮಾಡ್ತಿದೆ.
ಚಿತ್ರದ ಫಸ್ಟ್ ಲುಕ್ ಸಿಕ್ಕಾಪಟ್ಟೆ ಕ್ರೇಜ್ ಕ್ರಿಯೇಟ್ ಮಾಡಿದೆ. ಈ ಪೋಸ್ಟರ್ ನಲ್ಲಿ ರಿಷಬ್ ಶೆಟ್ಟಿ ಅವರು ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ನಗು ಮುಖದ ತುಂಬೆಲ್ಲಾ ರಕ್ತದ ಕಲೆಗಳಿದ್ದು, ಜನರನ್ನು ಕುತೂಹಲಕ್ಕೆ ದೂಡಿದೆ.
ಹೌದು ರಿಷಬ್ ಶೆಟ್ಟಿ ಅವರು ಈ ಬಾರಿ ‘ಹೀರೋ’ ಆಗಿ ತೆರೆ ಮೇಲೆ ಬರುತ್ತಿದ್ದಾರೆ. ಅಂದಹಾಗೆ ಈ ಚಿತ್ರದ ಹೆಸರೇ ‘ಹೀರೋ’. ಚಿತ್ರದ ಟೈಟಲ್ ನಿಂದಲೇ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿ ಕ್ರಿಯೇಟ್ ಮಾಡಿರುವ ಚಿತ್ರದಲ್ಲಿ ರಿಷಬ್ ಅವರು ನಟನೆ ಮಾಡಿದ್ದಾರೆ. ಚಿತ್ರಕ್ಕೆ ಹೊಸ ಪ್ರತಿಭೆಯಾದ ಭರತ್ ರಾಜ್ ಆಕ್ಷನ್ ಕಟ್ ಹೇಳಿದ್ದು, ಇದು ಅವರ ಚೊಚ್ಚಲ ಸಿನೆಮಾವಾಗಿದೆ. ವಿಶೇಷ ಎಂದ್ರೆ ರಿಷಬ್ ಶೆಟ್ಟಿ ಫಿಲಂಸ್ ನ ಅಡಿಯಲ್ಲಿ ಈ ಚಿತ್ರ ಮೂಡಿಬಂದಿದೆ.
ಇನ್ನೂ ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತವಿದ್ದು, ಅರವಿಂದ್ ಎಸ್ ಕಷ್ಯಪ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಸದ್ಯಕ್ಕೆ ಚಿತ್ರೀಕರಣ ಸಂಪೂರ್ಣವಾಗಿ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.








