ಗಂಗಾವತಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ : ಮೂವರ ಬಂಧನ.!
1 min read
ಗಂಗಾವತಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ : ಮೂವರ ಬಂಧನ.!
ಗಂಗಾವತಿ : ಹೊಸಳ್ಳಿ ರಸ್ತೆಯಲ್ಲಿ ಬರುವ ಲಕ್ಷ್ಮಿ ವೆಂಕಟೇಶ್ವರ ಕಾಲೋನಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ಭಾಗಿಯಾಗಿದ್ದ ಇಬ್ಬರು ಮಹಿಳೆಯರು ಸೇರಿ ಐವರನ್ನ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಸವರಾಜ ವಿಜಯಪುರ, ಮತ್ತು ಸುರೇಶ್ ಸಿಂಧನೂರು, ಬಸವರಾಜ ತೋಟದ ಮಸ್ಕಿ ಎಂದು ಗುರುತಿಸಲಾಗಿದೆ.
ನಗರದ ಹೊಸಳ್ಳಿ ರಸ್ತೆಯಲ್ಲಿ ಬರುವ ಲಕ್ಷ್ಮೀ ವೆಂಕಟೇಶ್ವರ ಕಾಲೋನಿಯ ಸಿದ್ದಲಿಂಗಯ್ಯ ಸಿದ್ದಪ್ಪ ಎನ್ನುವವರ ಮನೆಯನ್ನು ಬಸವರಾಜ ವಿಜಯಪುರ ಎಂಬ ವ್ಯಕ್ತಿ ಕಳೆದ ಫೆಬ್ರವರಿ 20 ರಂದು ಮನೆ ಬಾಡಿಗೆಗೆ ತಗೆದುಕೊಂಡು ವೈಶ್ಯವಾಟಿಕೆ ದಂಧೆ ನಡೆಸುತ್ತಿದ್ದಾನೆ ಎಂದು ಪೊಲೀಸರಿಗೆ ದೂರು ಬಂದಿದೆ.
ಬಳಿಕ ಖಚಿತ ಮಾಹಿತಿ ಮೇರೆಗೆ ಡಿಯೈಎಸ್ ಪಿ ರುದ್ರೇಶ ಉಜ್ಜನಿಕೊಪ್ಪ ರವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಸವರಾಜ ವಿಜಯಪುರ ಮೂಲತಃ ವಿಜಯಪುರ ಜಿಲ್ಲೆಯವನಾಗಿದ್ದು, ಈತ ಮಹಾರಾಷ್ಟ್ರ, ಪುಣೆ ಹಾಗೂ ವಿಜಯಪುರದ ಕಡೆಯಿಂದ ಮಹಿಳೆಯರನ್ನ ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಎಂದು ತಿಳಿದುಬಂದಿದೆ.
ಸದ್ಯ ಬಂಧಿತರದಲ್ಲಿ ಮಹಾರಾಷ್ಟ್ರ ಮೂಲದ ಮತ್ತು ವಿಜಯಪುರ ಜಿಲ್ಲೆಯ ಸಂತ್ರಸ್ತೆಯರನ್ನು ರಕ್ಷಣೆ ಮಾಡಿ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಲಾಗಿದೆ.
