ಬೆಳಗಾವಿ: ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಬೆಳಗಾವಿಯ ಹಿಡಕಲ್ ಜಲಾಶಯ ಶೇ.95 ರಷ್ಟು ಭರ್ತಿಯಾಗಿದೆ. ಈ ಹಿನ್ನಲೆ ಜಲಾಶಯದಿಂದ 10 ಕ್ರಸ್ಟ್ ಗೇಟ್ ಗಳ ಮೂಲಕ 5 ಸಾವಿರ ಕ್ಯೂಸೆಕ್ ನೀರನ್ನು ಘಟಪ್ರಭಾ ನದಿಗೆ ಬಿಡುಗಡೆ ಮಾಡಲಾಗುತ್ತಿದೆ.
2 ಸಾವಿರ ಎಡದಂಡೆ ಕಾಲುವೆ ಹಾಗೂ 2 ಸಾವಿರ ಪವರ್ ಹೌಸ್ ಮೂಲಕ ಒಟ್ಟು 9 ಸಾವಿರ ಕ್ಯೂಸೆಕ್ ನೀರು ಘಟಪ್ರಭಾ ನದಿಗೆ ರಿಲೀಸ್ ಮಾ2ಡಲಾಗಿದೆ. ಹೀಗಾಗಿ ಘಟಪ್ರಭಾ ನದಿಯ ಗೋಕಾಕ್ ಹಾಗೂ ಹುಕ್ಕೇರಿ ತಾಲೂಕಿನ ಗ್ರಾಮದ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಒಟ್ಟು 51 ಟಿಎಂಸಿ ಸಾಮರ್ಥ್ಯದ ಜಲಾಶಯಕ್ಕೆ 19 ಸಾವಿರ ಕ್ಯೂಸೆಕ್ ನೀರು ಒಳ ಹರಿವು ಹೆಚ್ಚಾಗಿದ್ದು, 9 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.








