ಹೈಕಮಾಂಡ್ ದಲಿತ ಸಮಾವೇಶ ಮಾಡಬೇಡಿ ಎಂದು ಎಲ್ಲೂ ಹೇಳಿಲ್ಲ. ಹೈಕಮಾಂಡ್ ಅನುಮೋದನೆ ನೀಡಿದರೆ ಸಮಾವೇಶ ನಡೆಸಲಾಗುವುದು, ಎಂದು ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಮುನಿಯಪ್ಪ, ಸಮಾವೇಶ ಮಾಡಬೇಕೆಂದು ರಾಜಣ್ಣ, ಪರಮೇಶ್ವರ್ ಸೇರಿದಂತೆ ಹಲವರು ಮನವಿ ಮಾಡಿದ್ದಾರೆ. ಹೈಕಮಾಂಡ್ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ, ಎಂದು ತಿಳಿಸಿದ್ದಾರೆ.
ಈ ಹಿಂದೆ ಚಿತ್ರದುರ್ಗದಲ್ಲಿ ನಡೆದ ದಲಿತ ಸಮಾವೇಶ ಯಶಸ್ವಿಯಾಗಿತ್ತು. ಈಗ ಮತ್ತೊಮ್ಮೆ ಸಮಾವೇಶ ನಡೆಸುವ ಅಗತ್ಯವಿದೆ, ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.








