ಹೈಕಮಾಂಡ್ ಸೂಚನೆ ಎಲ್ಲರೂ ಪಾಲಿಸಬೇಕು : ಸಿ.ಟಿ.ರವಿ
ಬಿ.ಎಸ್.ಯಡಿಯೂರಪ್ಪ ಅವರಿಗೆ ಪಕ್ಷ ಎಲ್ಲವನ್ನೂ ನೀಡಿದೆ
ಪಣಜಿ : ಹೈಕಮಾಂಡ್ ಸೂಚನೆಯನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳುವ ಮೂಲಕ ಸಿ.ಟಿ.ರವಿ ಪರೋಕ್ಷವಾಗಿ ಬಿ.ಎಸ್.ಯಡಿಯೂರಪ್ಪಗೆ ರಾಜೀನಾಮೆ ಕುರಿತು ಸಲಹೆ ನೀಡಿದ್ದಾರೆ.
ನಾಯಕತ್ವ ಬದಲಾವಣೆ ಬಗ್ಗೆ ಗೋವಾದಲ್ಲಿ ಮಾತನಾಡಿದ ಸಿ.ಟಿ.ರವಿ, ಬಿ.ಎಸ್.ಯಡಿಯೂರಪ್ಪ ಜನಪ್ರಿಯ ನಾಯಕ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ.
ಬಿ.ಎಸ್.ಯಡಿಯೂರಪ್ಪ ಅವರಿಗೆ ಪಕ್ಷ ಎಲ್ಲವನ್ನೂ ನೀಡಿದೆ. ವಿಪಕ್ಷ ನಾಯಕನಾಗಿ, ಉಪಮುಖ್ಯಮಂತ್ರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.
4 ಬಾರಿ ಮುಖ್ಯಮಂತ್ರಿಯಾಗಿ ಜನಸೇವೆ ಮಾಡುವ ಅವಕಾಶ ನೀಡಲಾಗಿದೆ. ಇಷ್ಟೊಂದು ಅವಕಾಶವನ್ನು ಬೇರೆ ಯಾವುದೇ ಪಕ್ಷದಲ್ಲಿ ಕೂಡ ನೀಡಲ್ಲ.
ಪಕ್ಷದಲ್ಲಿ ಹೈಕಮಾಂಡ್ ಆದೇಶವನ್ನು ಎಲ್ಲರೂ ಪಾಲಿಸಲೇಬೇಕು. ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಬೇಕು ಎಂದು ಹೇಳಿದ್ದಾರೆ.
ಸಿಎಂ ಬಗ್ಗೆ ಸ್ವಪಕ್ಷೀಯರು ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿ.ಟಿ. ರವಿ, ಈ ಬಗ್ಗೆ ನಾನೇನೂ ಮಾತನಾಡಲ್ಲ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪಕ್ಷದ ಬೆಳವಣಿಗೆ ಬಗ್ಗೆ ಗಮನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.









